ADVERTISEMENT

ವಾಹನ ಅಪಘಾತ: ಗಣಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 7:00 IST
Last Updated 31 ಜನವರಿ 2026, 7:00 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಸಿರಿಗೆರೆ: ಸಮೀಪದ ಭೀಮಸಮುದ್ರ ಬಳಿಯ  ಗಣಿಗಾರಿಕೆ ಪ್ರದೇಶದಲ್ಲಿ ವಾಹನವೊಂದು ಶುಕ್ರವಾರ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಚಂದ್ರಶೇಖರ್‌ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭೀಮಸಮುದ್ರ ಸಮೀಪವಿರುವ ಗಣಿ ಪ್ರದೇಶದಲ್ಲಿನ ಜೆ.ಎಸ್.‌ಡಬ್ಲ್ಯೂ ಕಂಪನಿಯಲ್ಲಿ ಸೂಪರ್‌ವೈಸರ್‌ ಆಗಿ ಅವರು ಕೆಲಸ ಮಾಡುತ್ತಿದ್ದರು.

ADVERTISEMENT

ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಕುಟುಂಬ ವರ್ಗದವರು ಗಣಿಗಾರಿಕೆ ನಡೆಸುತ್ತಿರುವ ಕಂಪನಿಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ‘ಕಂಪನಿಯವರು ಕುಟುಂಬ ವರ್ಗದವರಿಗೂ ತಿಳಿಸದೆ ಶವವನ್ನು ಚಿತ್ರದುರ್ಗಕ್ಕೆ ರವಾನಿಸಿದ್ದಾರೆ. ಇದರಿಂದ ಸಾವಿನ ಬಗ್ಗೆ ಅನುಮಾನ ಉಂಟಾಗಿದೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.