
ಮೊಳಕಾಲ್ಮುರು: ತಾಲ್ಲೂಕಿನ ತುಮಕೂರ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ಬಿ.ಜಿ.ಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಉತ್ಸವ ಹಮ್ಮಿಕೊಳ್ಳಲಾಗಿತ್ತು.
ಪಠ್ಯೇತರ ಚಟುವಟಿಕೆಗಳಾದ ಕಥೆ ಹೇಳುವುದು, ಕೈ ಬರವಣಿಗೆ, ಸಂತಸದಾಯಿಕ ಗಣಿತ, ನೆನಪಿನ ಶಕ್ತಿ ಪರೀಕ್ಷೆ, ಪೋಷಕರು ಮತ್ತು ಮಕ್ಕಳ ಸಹ ಸಂಬಂಧ, ಆರೋಗ್ಯ ಮತ್ತು ಪೌಷ್ಟಿಕಾಂಶ, ರಸಪ್ರಶ್ನೆ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ಲಸ್ಟರ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿವೃತ್ತ ಶಿಕ್ಷಣ ಸಂಯೋಜಕ ಟಿ.ಜಿ. ಬಸಣ್ಣ ಮಾತನಾಡಿ, ‘ಸರ್ಕಾರ ಸರ್ಕಾರಿ ಶಾಲೆಗಳನ್ನು ಸದೃಢ ಮಾಡಿ ಹಾಜರಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದರೆ, ಕೆಲ ಪೋಷಕರ ಖಾಸಗಿ ಶಾಲೆ ವ್ಯಾಮೋಹದಿಂದಾಗಿ ಕಾರ್ಯಕ್ರಮಗಳು ನಿರೀಕ್ಷಿತ ಗುರಿ ಮುಟ್ಟಿಲ್ಲ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ನೀಗಿಸಲು ಶಿಕ್ಷಕರು ಶ್ರಮಿಸಬೇಕು’ ಎಂದು ಹೇಳಿದರು.
ಸಿಆರ್‌ಪಿ ಖಾಲಿದ್ ಹುಸೇನ್, ಮುಖ್ಯ ಶಿಕ್ಷಕರಾದ ಮಂಜುನಾಥ್, ನಿರ್ಮಲಾ, ಎಸ್‌ಡಿಎಂಸಿ ಅಧ್ಯಕ್ಷ ಯುವರಾಜ್, ಮಾಜಿ ಅಧ್ಯಕ್ಷ ಮಂಜಣ್ಣ, ಶಿಕ್ಷಕರಾದ ಎಸ್.ಬಿ. ರಾಮಚಂದ್ರಯ್ಯ, ಬಿ.ಆರ್. ತಿಪ್ಪೇಶ್, ಉಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.