ADVERTISEMENT

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ: ಕಣದಿಂದ ಮುರಾರ್ಜಿ ನಿವೃತ್ತಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 9:28 IST
Last Updated 4 ನವೆಂಬರ್ 2021, 9:28 IST
ಡಿ.ಓ.ಮುರಾರ್ಜಿ
ಡಿ.ಓ.ಮುರಾರ್ಜಿ   

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಿ.ಓ.ಮುರಾರ್ಜಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ.

‘ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ಬೆಂಬಲಿಸುವ ಉದ್ದೇಶದಿಂದ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದೇನೆ. ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಂಡಿದ್ದೇನೆ. ಜನಪರ ಕಾಳಜಿ ಹೊಂದಿರುವ ಷಣ್ಮುಖ ಅವರು ಜಿಲ್ಲೆಯ ನೀರಾವರಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ’ ಎಂದುಡಿ.ಓ.ಮುರಾರ್ಜಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಧನಂಜಯಕುಮಾರ್‌ ಮಾತನಾಡಿ, ‘ಮಾಸಾಶನ ಮಂಜೂರಾತಿ ರಾಜ್ಯ ಸಮಿತಿ ಸದಸ್ಯರಾಗಿರುವ ಮುರಾರ್ಜಿ ಅವರಿಗೆ ಎರಡೂ ಜವಾಬ್ದಾರಿ ನಿಭಾಯಿಸುವುದು ಕಷ್ಟ. ಹಾಗಾಗಿ ಚುನಾವಣಾ ಕಣದಿಂದ ನಿವೖತ್ತಿಯಾಗುವ ಅನಿವಾರ್ಯತೆ ಸೖಷ್ಟಿಯಾಯಿತು. ಹೋರಾಟ ಮನೋಭಾವದ ಷಣ್ಮುಖ ಅವರನ್ನು ಬೆಂಬಲಿಸಲು ನಿರ್ಣಯಿಸಲಾಯಿತು’ ಎಂದರು.

ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ಟಿ.ಲೋಲಾಕ್ಷಮ್ಮ, ಕನ್ನಡ ಸಾಹಿತ್ಯ ಪರಿಷತ್ತಿನ ಮೊಳಕಾಲ್ಮುರು ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಎನ್.ನೀಲರಾಜ್, ಶಾರದಾ ಬ್ರಾಸ್ ಬ್ಯಾಂಡ್‌ನ ಗುರುಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.