ADVERTISEMENT

ಚಿತ್ರದುರ್ಗ | ಕನ್ನಡ ನಾಮಫಲಕ ಆದೇಶ ಪಾಲನೆಗೆ ಆಗ್ರಹ

ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 7:36 IST
Last Updated 18 ಅಕ್ಟೋಬರ್ 2025, 7:36 IST
ಚುನಾವಣಾ ಶಾಖೆ ತಹಶೀಲ್ದಾರ್ ಬೀಬಿ ಫಾತಿಮ ಅವರಿಗೆ ಮನವಿ ಸಲ್ಲಿಸಿದ ಕರುನಾಡ ವಿಜಯಸೇನೆ ಜಿಲ್ಲಾ ಘಟಕ
ಚುನಾವಣಾ ಶಾಖೆ ತಹಶೀಲ್ದಾರ್ ಬೀಬಿ ಫಾತಿಮ ಅವರಿಗೆ ಮನವಿ ಸಲ್ಲಿಸಿದ ಕರುನಾಡ ವಿಜಯಸೇನೆ ಜಿಲ್ಲಾ ಘಟಕ   

ಚಿತ್ರದುರ್ಗ: ಸರ್ಕಾರದ ಆದೇಶವಿದ್ದರೂ ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿಗಳ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಶುಕ್ರವಾರ ಪ್ರತಿಭಟನೆ ನಡೆಸಿತು.

ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಗಡಿ ಮಾಲೀಕರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.

ಶೇ 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂಬ ನಿಯಮವಿದ್ದರೂ ಪಾಲನೆ ಮಾಡುತ್ತಿಲ್ಲ. ಖಾಸಗಿ ಆಸ್ಪತ್ರೆ, ಶಾಲೆ, ಕಾಲೇಜು, ಸಂಘ ಸಂಸ್ಥೆಗಳು ನಿಯಮ ಮೀರಿವೆ. ಈ ಬಗ್ಗೆ ನಗರಸಭೆ ಪೌರಾಯುಕ್ತರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ADVERTISEMENT

ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು. ರಾಜ್ಯೋತ್ಸವ ಆಚರಣೆ ಸಂಬಂಧ ಕನ್ನಡ ಪರ ಸಂಘಟನೆಗಳನ್ನು ದೂರವಿಟ್ಟು ಜಿಲ್ಲಾಡಳಿತ ಈಚೆಗೆ ಸಭೆ ನಡೆಸಿ ಹೋರಾಟಗಾರರಿಗೆ ಅವಮಾನ ಮಾಡಿದೆ. ಮತ್ತೊಮ್ಮೆ ಸಭೆ ಕರೆದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಚರ್ಚಿಸಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಶಾಖೆ ತಹಶೀಲ್ದಾರ್ ಬೀಬಿ ಫಾತಿಮ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್‌, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್‌, ಕಾರ್ಯದರ್ಶಿ ಜಗದೀಶ್‌, ಯುವ ಘಟಕದ ಅಧ್ಯಕ್ಷ ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.