ADVERTISEMENT

ಲೈಂಗಿಕ ಕಿರುಕುಳ ನೀಡಿದ ಆರೋಪ: ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 4:08 IST
Last Updated 24 ಸೆಪ್ಟೆಂಬರ್ 2022, 4:08 IST
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ/ಶಿವಮೊಗ್ಗ:ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿದೆ. ಹೀಗಾಗಿ ಅವರುಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆತಕರಾರುಸಲ್ಲಿಸಿದ್ದವಿಶೇಷ ಸರ್ಕಾರಿ ವಕೀಲೆ ಕೆ.ಬಿ. ನಾಗವೇಣಿ, 'ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ’ ಎಂದು ವಾದಿಸಿದ್ದರು.

ADVERTISEMENT

ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರುವಕೀಲರ ವಾದವನ್ನು ಪರಿಗಣಿಸಿದ್ದು, ಶರಣರಅರ್ಜಿ ತಿರಸ್ಕರಿಸಿದರು.

ಚಿತ್ರದುರ್ಗಕ್ಕೆ ವಾಪಸ್‌
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಶರಣರನ್ನುಶಿವಮೊಗ್ಗದ ಮೆಗ್ಗಾನ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆಅವರನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು.

ಸದ್ಯ ಆರೋಗ್ಯಸ್ಥಿರವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಶರಣರನ್ನು ಆಸ್ಪತ್ರೆಯಿಂದ ಚಿತ್ರದುರ್ಗದ ಕಾರಾಗೃಹಕ್ಕೆ ವಾಪಸ್‌ಕರೆದೊಯ್ಯಲಾಗಿದೆ.

'ವೈದ್ಯಕೀಯ ಪ್ರಕ್ರಿಯೆಯ ವರದಿಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಆಗುವಾಗಶರಣರು ಆರೋಗ್ಯವಾಗಿದ್ದಾರೆ' ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿರೂಪಾಕ್ಷಪ್ಪ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.