ADVERTISEMENT

ನೆಹರೂ, ವಾಜಪೇಯಿ ಅವರನ್ನು ಅವಹೇಳನ ಮಾಡುವುದು ತಪ್ಪು: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 7:07 IST
Last Updated 15 ಆಗಸ್ಟ್ 2021, 7:07 IST
ಸಾರಿಗೆ ಸಚಿವ ಬಿ.ಶ್ರೀರಾಮುಲು
ಸಾರಿಗೆ ಸಚಿವ ಬಿ.ಶ್ರೀರಾಮುಲು    

ಚಿತ್ರದುರ್ಗ: ಪ್ರಧಾನಿ ಹುದ್ದೆಗೆ ಏರಿದ್ದ ಜವಾಹರಲಾಲ್ ನೆಹರೂ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರದು ಮೇರು ವ್ಯಕ್ತಿತ್ವ. ಈ ವಿಚಾರವಾಗಿ ಎರಡೂ ಪಕ್ಷದ (ಕಾಂಗ್ರೆಸ್ ಮತ್ತು ಬಿಜೆಪಿ) ನಾಯಕರು ಅವಹೇಳನಕಾರಿಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ಮತ್ತು ನೆಹರೂ ಹಿರಿಯ ನಾಯಕರು. ಅವರನ್ನು ಅವಹೇಳನ ಮಾಡುವುದು ತಪ್ಪು. ರಾಜಕಾರಣಕ್ಕೆ ದೊಡ್ಡ ನಾಯಕರ ಹೆಸರು ಎಳೆದು ತರುವುದು ಸರಿಯಲ್ಲ. ಇಬ್ಬರ ಹೆಸರಿನಲ್ಲಿ ನಡೆಯುತ್ತಿರುವ ವಿವಾದಕ್ಕೆ ತೆರೆ ಎಳೆಯಬೇಕಿದೆ' ಎಂದು ಹೇಳಿದರು.

ನೆಹರೂ ಬಗ್ಗೆ ವಾಜಪೇಯಿ ಅವರಿಗೆ ಅಪಾರ ಗೌರವ ಇತ್ತು. ಮೊರಾರ್ಜಿ ದೇಸಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ವಾಜಪೇಯಿ, ನೆಹರೂ ಅವರ ಪ್ರತಿಮೆ ಪುನರ್ ಸ್ಥಾಪನೆ ಆಗುವಂತೆ ನೋಡಿಕೊಂಡರು. ಇಂತಹ ಇಬ್ಬರೂ ನಾಯಕರ ಬಗ್ಗೆ ಮಾತು ಮಿತಿ ಮೀರುತ್ತಿವೆ. ರಾಜಕಾರಣದಲ್ಲಿ ಇರುವವರು ಯಾರನ್ನು ಬೇಕಾದರೂ ಟೀಕೆ ಮಾಡಬಹುದು ಎಂಬುದು ಸರಿಯಲ್ಲ' ಎಂದರು.

ADVERTISEMENT

ಬಿಜೆಪಿ ಸರ್ಕಾರ ಪತನವಾಗಿ ತಾವು ಅಧಿಕಾರಕ್ಕೆ ಬರುತ್ತೇವೆ ಎಂದು ಕೆಲವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.