ಪ್ರಾತಿನಿಧಿಕ ಚಿತ್ರ
ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆ ಶೇ 72.85 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 21ನೇ ಸ್ಥಾನಕ್ಕೆ ಕುಸಿದಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿತ್ತು.
ಕಳೆದ ವರ್ಷ ಜಿಲ್ಲೆ ಶೇ 96.8 ರಷ್ಟು ಫಲಿತಾಂಶ ಪಡೆದು ರಾಜ್ಯದ ಗಮನ ಸೆಳೆದಿತ್ತು. ಉತ್ತೀರ್ಣ ಪ್ರಮಾಣದಲ್ಲಿ ಶೇ 24ರಷ್ಟು ಕಡಿಮೆಯಾಗಿದೆ. 2021-22ನೇ ಸಾಲಿನಲ್ಲಿ ಶೇ 94.31 ಫಲಿತಾಂಶ ಪಡೆದ ಜಿಲ್ಲೆ, ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು.
ಜಿಲ್ಲೆಯಲ್ಲಿ 24,228 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿದ್ದರು. ಫಲಿತಾಂಶ ಪಟ್ಟಿಯ ಮೊದಲ ಹತ್ತು ಸ್ಥಾನದಲ್ಲಿ ಚಿತ್ರದುರ್ಗ ಇರಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಅಳವಡಿಸಿದ ಪರಿಣಾಮವಾಗಿ ನೈಜ ಫಲಿತಾಂಶ ಹೊರಬಿದ್ದಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.