ಹೊಸದುರ್ಗ: ಪಟ್ಟಣದ ಎಸ್. ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ಎಂ.ಪಿ. ಪ್ರಕಾಶ್ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಶೇ 90ರಷ್ಟು ಫಲಿತಾಂಶ ಲಭಿಸಿದೆ.
ಅತ್ಯುನ್ನತ ಶ್ರೇಣಿಯಲ್ಲಿ 56, ಪ್ರಥಮ ಶ್ರೇಣಿಯಲ್ಲಿ 80 ಹಾಗೂ ದ್ವಿತೀಯ ಶ್ರೇಣಿಯಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಮಿತ್ ವಿ. 625 ಕ್ಕೆ 618 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಕನ್ನಡ ವಿಷಯದಲ್ಲಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ 4, ಹಿಂದಿಯಲ್ಲಿ 9, ಗಣಿತದಲ್ಲಿ 3, ವಿಜ್ಞಾನ ವಿಷಯದಲ್ಲಿ 6 ಹಾಗೂ ಸಮಾಜ ವಿಜ್ಞಾನದಲ್ಲಿ 6 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಧರ್ಮದರ್ಶಿ, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.