ADVERTISEMENT

ಕೊಂಡ್ಲಹಳ್ಳಿ: ಆಂಜನೇಯ ಸ್ವಾಮಿ ರಥೋತ್ಸವ ನಾಳೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 7:03 IST
Last Updated 31 ಜನವರಿ 2026, 7:03 IST
ಮೊಳಕಾಲ್ಮುರು ತಾಲ್ಲೂಕಿನ ಕೊಂಡ್ಲಹಳ್ಳಿಯ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ.
ಮೊಳಕಾಲ್ಮುರು ತಾಲ್ಲೂಕಿನ ಕೊಂಡ್ಲಹಳ್ಳಿಯ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ.   

ಮೊಳಕಾಲ್ಮುರು: ತಾಲ್ಲೂಕಿನ ದೊಡ್ಡ ರಥೋತ್ಸವಗಳಲ್ಲಿ ಒಂದಾದ ಕೊಂಡ್ಲಹಳ್ಳಿಯ ಅಭಯ ಆಂಜನೇಯ ಸ್ವಾಮಿ ರಥೋತ್ಸವ ಫೆ. 1ರಂದು ಮಧ್ಯಾಹ್ನ ನಡೆಯಲಿದೆ.

ಪ್ರತಿವರ್ಷ ಭರತ ಹುಣ್ಣಿಮೆಯಂದು ಈ ರಥೋತ್ಸವ ನಡೆಸಿಕೊಂಡು ಬರುವುದು ವಾಡಿಕೆ. ಇದರ ಅಂಗವಾಗಿ ಶನಿವಾರ ಸಂಜೆ ದೇವರ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಗಂಗಾಪೂಜೆಗೆ ಕರೆದುಕೊಂಡು ಹೋಗಲಾಗುವುದು. ವಾಪಸ್‌ ಬಂದ ನಂತರ ಗುಡಿದುಂಬಿಸಿಕೊಂಡು ವಿಶೇಷ ಪೂಜೆ ಸಲ್ಲಿಸಲಾಗುವುದು.

ಭಾನುವಾರ ಸ್ವಾಮಿಗೆ ರುದ್ರಾಭಿಷೇಕ ಸಲ್ಲಿಕೆ ನಂತರ ರಥದ ಮುಂಭಾಗದಲ್ಲಿ ಹೋಮ ನಡೆಯಲಿದೆ. ಮುಕ್ತಿಬಾವುಟ ಹರಾಜು ನಂತರ ಮಧ್ಯಾಹ್ನ 2 ಗಂಟೆಯಿಂದ ರಥೋತ್ಸವಕ್ಕೆ ಚಾಲನೆ ಸಿಗಲಿದೆ. ಸೋಮವಾರ ಮಧ್ಯಾಹ್ನ ಹೂವಿನ ಪಲ್ಲಕ್ಕಿ ಉತ್ಸವ ಗ್ರಾಮದ ಮುಖ್ಯಬೀದಿಗಳಲ್ಲಿ ನಡೆದ ನಂತರ ದೇವರನ್ನು ಗುಡಿದುಂಬಿಸುವ ಮೂಲಕ ಜಾತ್ರೆಗೆ ತೆರೆ ಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.