ADVERTISEMENT

ಕೋವಿಡ್: 26 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 4:08 IST
Last Updated 1 ಡಿಸೆಂಬರ್ 2020, 4:08 IST

ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್‌ಗೆ ‌ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 26 ಜನ ಗುಣಮುಖರಾಗಿದ್ದಾರೆ. ವರದಿಯಲ್ಲಿ ಹೊಸದಾಗಿ 17 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13,570ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 799 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ವರದಿಯಲ್ಲಿ 17 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.

‘ಕೋವಿಡ್‌ ಸೋಂಕಿತರಲ್ಲಿ ಈವರೆಗೆ 13,234 ಜನರು ಗುಣಮುಖರಾಗಿದ್ದಾರೆ. 64 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, 271 ಸಕ್ರಿಯ ಪ್ರಕರಣಗಳಿವೆ. 776 ಜನರ ವರದಿ ಬರುವುದು ಬಾಕಿ ಇದೆ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.