
ವೈ.ಕುಮಾರ್
ಚಿತ್ರದುರ್ಗ: ‘ನೋಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗೆ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚನೆಯಾಗಬೇಕು. ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು’ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಆಗ್ರಹಿಸಿದರು.
‘42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರರು, ನಿಯೋಜಕರು, ಮನೆ ಮಾಲೀಕರು ಕಾಮಗಾರಿ ಆರಂಭವಾದ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ 2ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನವಿಲ್ಲದಂತಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಸೆಸ್ ಪಾವತಿಸದ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಜತೆಗೆ ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ’ ಎಂದು ತಿಳಿಸಿದರು.
ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ಮಂಜುನಾಥ್, ಮುಖಂಡರಾದ ಡಿ.ಈಶ್ವರಪ್ಪ, ಆರ್.ಗೌಸ್‌ಪೀರ್, ನರಸಿಂಹಮೂರ್ತಿ, ಗೌಸ್‌ಖಾನ್, ರಫೀಕ್, ತಿಮ್ಮಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.