ADVERTISEMENT

ದುಮ್ಮಿಯಲ್ಲಿ ಕಾನೂನು ಸಲಹಾ ಕೇಂದ್ರ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 30 ಮೇ 2025, 14:12 IST
Last Updated 30 ಮೇ 2025, 14:12 IST
ಹೊಳಲ್ಕೆರೆ ತಾಲ್ಲೂಕಿನ ದುಮ್ಮಿಯಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎನ್.ಎಸ್.ರಘುರಾಮ್ ಅವರು ಕಾನೂನು ಸಲಹಾ ಕೇಂದ್ರವನ್ನು ಉದ್ಘಾಟಿಸಿದರು
ಹೊಳಲ್ಕೆರೆ ತಾಲ್ಲೂಕಿನ ದುಮ್ಮಿಯಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎನ್.ಎಸ್.ರಘುರಾಮ್ ಅವರು ಕಾನೂನು ಸಲಹಾ ಕೇಂದ್ರವನ್ನು ಉದ್ಘಾಟಿಸಿದರು   

ಹೊಳಲ್ಕೆರೆ: ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲ್ಲೂಕಿನ ದುಮ್ಮಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲಾಯಿತು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎನ್.ಎಸ್.ರಘುರಾಮ್ ಅವರು ಕಾನೂನು ಸಲಹಾ ಕೇಂದ್ರಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಕಾನೂನು ಸಲಹಾ ಕೇಂದ್ರಕ್ಕೆ ಪ್ಯಾನಲ್ ವಕೀಲರನ್ನು ನೇಮಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತೀ ಸೋಮವಾರ ಮತ್ತು ಗುರುವಾರ ಉಚಿತ ಕಾನೂನು ಸಲಹೆಯನ್ನು ನೀಡಲಾಗುವುದು. ಎಲ್ಲರೂ ಕಾನೂನು ಸಲಹೆ ಪಡೆದುಕೊಳ್ಳಬೇಕು’ ಎಂದರು.

ADVERTISEMENT

ತಹಶೀಲ್ದಾರ್ ಬೀಬಿ ಫಾತಿಮಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಪಿ.ಸವಿತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಪಿ.ವಿಶ್ವನಾಥ್, ಪಿಡಿಒ ಸಿ.ರಾಘವೇಂದ್ರ, ಉಪಾಧ್ಯಕ್ಷ ರಾಜಪ್ಪ, ಪ್ಯಾನಲ್ ವಕೀಲರಾದ ಆರ್.ಹನುಮಂತಪ್ಪ, ಎ.ಎಂ.ಶಿವಾನಂದ, ಸಾಕಮ್ಮ, ರಾಮಗಿರಿ ರಾಜಸ್ವ ನಿರೀಕ್ಷಕ ನಾಗರಾಜ, ಗ್ರಾಮ ಆಡಳಿತಾಧಿಕಾರಿ ಮುಸ್ತಫಾ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.