ADVERTISEMENT

ಹೊಸದುರ್ಗ: ಆನಿವಾಳ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆಯ ಸೆರೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 5:22 IST
Last Updated 17 ಡಿಸೆಂಬರ್ 2021, 5:22 IST
ಹೊಸದುರ್ಗ ತಾಲ್ಲೂಕಿನ ಆನಿವಾಳ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಯಶಸ್ವಿಯಾಗಿದ್ದಾರೆ.
ಹೊಸದುರ್ಗ ತಾಲ್ಲೂಕಿನ ಆನಿವಾಳ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಯಶಸ್ವಿಯಾಗಿದ್ದಾರೆ.   

ಹೊಸದುರ್ಗ: ತಾಲ್ಲೂಕಿನ ಆನಿವಾಳ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಯಶಸ್ವಿಯಾಗಿದ್ದಾರೆ.

ಗ್ರಾಮದ ಹೊರವಲಯದ ಚೌಡಮ್ಮ ದೇವಸ್ಥಾನದ ಸಮೀಪ ಕಾಯ್ದಿರಿಸಿದ್ದ ಬೋನಿನಲ್ಲಿ ಗುರುವಾರ ಮುಂಜಾನೆ ಚಿರತೆ ಸೆರೆ ಸಿಕ್ಕಿದೆ.

ಆನಿವಾಳ ಗ್ರಾಮದಲ್ಲಿ ಮಂಗಳವಾರ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಿಳಿರಂಗಯ್ಯನ ಬೆಟ್ಟದ ಅರಣ್ಯಧಾಮಕ್ಕೆ ಬಿಟ್ಟು ಬಂದಿದ್ದರು. ಇನ್ನೆರಡು ಚಿರತೆಗಳಿವೆ ಎಂಬ ಖಚಿತ ಮಾಹಿತಿ ಮೇರೆಗೆ ಚೌಡಮ್ಮ ದೇವಸ್ಥಾನದ ಆಸುಪಾಸಿನಲ್ಲಿ ಬೋನ್ ಇರಿಸಲಾಗಿತ್ತು. ಬೋನಿನೊಳಗೆ ಮೇಕೆ ಮರಿ ಇರಿಸಿ ಚಿರತೆ ಸೆರೆ ಹಿಡಿಯಲು ಯೋಜನೆ ರೂಪಿಸಲಾಗಿತ್ತು. ಇಲಾಖೆ ಯೋಜನೆ ಪ್ರಕಾರವೇ ಮೇಕೆ ತಿನ್ನಲು ಬಂದ ಚಿರತೆ ಬೋನಿನೊಳಗೆ ಕಾಲಿಟ್ಟು ಬಂಧಿಯಾಗಿದೆ.

ADVERTISEMENT

ಇನ್ನೂ ಒಂದು ಚಿರತೆ ಇದ್ದು, ಮತ್ತೆ ಬೋನ್ ಅಳವಡಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.