ADVERTISEMENT

ಚಿತ್ರದುರ್ಗ | ವಾಹನ ಡಿಕ್ಕಿಯಾಗಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 5:11 IST
Last Updated 21 ಫೆಬ್ರುವರಿ 2023, 5:11 IST
ಅಪಘಾತದಲ್ಲಿ ಮೃತಪಟ್ಟ ಚಿರತೆ
ಅಪಘಾತದಲ್ಲಿ ಮೃತಪಟ್ಟ ಚಿರತೆ   

ಚಿತ್ರದುರ್ಗ: ತಾಲ್ಲೂಕಿನ ದೊಡ್ಡಸಿದ್ದವ್ವನ ಹಳ್ಳಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.

ಚಿರತೆ ಮಂಗಳವಾರ ನಸುಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಸಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ರಾಷ್ಟ್ರೀಯ ಹೆದ್ದಾರಿ ದೊಡ್ಡ ಸಿದ್ದವ್ವನಹಳ್ಳಿ ಸಮೀಪ ನಿರ್ಮಾಣವಾಗಿ ವರ್ಷ ಕಳೆದಿದೆ. ಈ ಅವಧಿಯಲ್ಲಿ ಆರು ಚಿರತೆ ಹಾಗೂ ಒಂದು ಕರಡಿ ಅಪಘಾತಕ್ಕೆ ಬಲಿಯಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.