ಮೊಳಕಾಲ್ಮುರು: ತಾಲ್ಲೂಕಿನ ಕೋನಸಾಗರ ಸಮೀಪದ ಭದ್ರಪ್ಪನ ತೋಪು ಹಿಂಭಾಗದ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಸೋಮವಾರ ಕಾಣಿಸಿದ್ದ ಚಿರತೆಯು ಕಲ್ಲಿನ ಬಂಡೆಯೊಂದರ ಮೇಲೆ ಒಂದು ಗಂಟೆಗೂ ಹೆಚ್ಚು ಸಮಯ ಕುಳಿತಿತ್ತು. ಮೇಯಲು ಹೋಗಿದ್ದ ಸಮೀಪದ ಹಟ್ಟಿಯ ಸಣ್ಣಬೋರಯ್ಯ ಅವರ ಆಕಳ ಕರುವಿನ ಮೇಲೆ ದಾಳಿ ಮಾಡಿದ್ದು, ಕುತ್ತಿಗೆ ಹಾಗೂ ಕಾಲಿನ ಭಾಗದಲ್ಲಿ ತೀವ್ರ ಗಾಯವಾಗಿದೆ ಎಂದು ಗ್ರಾಮಸ್ಥ ಓಬಯ್ಯ ಮಾಹಿತಿ ನೀಡಿದರು.
ಬೆಟ್ಟದ ಸಮೀಪದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸಾಕಷ್ಟು ಕುರಿಗಳು ಮತ್ತು ಜಾನುವಾರುಗಳನ್ನು ಮೇಯಿಸಲು ಜನರು ಬೆಟ್ಟಕ್ಕೆ ಹೋಗುತ್ತಾರೆ. ಕುರಿ ಕಾಯಲು ಮಹಿಳೆಯರೂ ಹೋಗುತ್ತಾರೆ. ಅನಾಹುತ ಆಗುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಬೋನು ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಮನವಿ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.