ಚಿತ್ರದುರ್ಗ: ತಾಲ್ಲೂಕಿನ ಸಿರಿಗೆರೆಯಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಮಂಗಳವಾರ ಬಿದ್ದಿದೆ.
ಸಿರಿಗೆರೆ ಗ್ರಾಮ ಸಮೀಪದ ತರಬಾಳು ಮಠಕ್ಕೆ ಸೇರಿದ ಜಮೀನಿನಲ್ಲಿ ವಾರದ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಜಾನುವಾರುಗಳ ಮೇಲೆ ದಾಳಿ ನಡೆಸಿ, ಒಂದು ಕರುವನ್ನು ಹೊತ್ತೊಯ್ದಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.
ಚಿರತೆ ಸೆರೆಗೆ ಅರಣ್ಯ ಇಲಾಖೆ ಜಮೀನಿನಲ್ಲಿ ಬೋನು ಇಟ್ಟಿತ್ತು. ಚಿರತೆ ಬೋನಿಗೆ ಬಿದ್ದಿರುವುದನ್ನು ಗಮನಿಸಿದ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸೆರೆ ಸಿಕ್ಕ ಚಿರತೆಯನ್ನು ನೋಡಲು ಅಪಾರ ಪ್ರಮಾಣದ ಜನರು ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.