ADVERTISEMENT

ಭರಮಸಾಗರ: ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ ಚಳವಳಿ

ಭರಮಸಾಗರ: ಸರ್ಕಾರಿ ಪಿಯು ಕಾಲೇಜಿಗಾಗಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 6:25 IST
Last Updated 5 ಫೆಬ್ರುವರಿ 2023, 6:25 IST
ಭರಮಸಾಗರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಶನಿವಾರ ವಿದ್ಯಾರ್ಥಿಗಳು ಪ್ರಧಾನಿಗೆ ಪತ್ರ ಬರೆದರು.
ಭರಮಸಾಗರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಶನಿವಾರ ವಿದ್ಯಾರ್ಥಿಗಳು ಪ್ರಧಾನಿಗೆ ಪತ್ರ ಬರೆದರು.   

ಭರಮಸಾಗರ: ಸರ್ಕಾರಿ ಪದವಿಪೂರ್ವ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಗ್ರಾಮದಲ್ಲಿ ಪತ್ರ ಚಳವಳಿ ನಡೆಸಿದರು.

ಬೆಳಿಗ್ಗೆ ಅಂಚೆ ಕಚೇರಿಗೆ ತೆರಳಿ ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲದ್ದರಿಂದ ಬಡ ವಿದ್ಯಾರ್ಥಿಗಳು ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿ ಪ್ರಧಾನಿ ಮೋದಿಗೆ ಪತ್ರ ಬರೆದರು.

ವಿದ್ಯಾರ್ಥಿಗಳು, ವಿವಿಧ ಸಂಘಟನೆ ಸದಸ್ಯರು, ಪೋಷಕರು, ಗ್ರಾಮಸ್ಥರು ಸಂಬಂಧಪಟ್ಟವರಿಗೆ ಈ ಬಗ್ಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪತ್ರ ಚಳವಳಿ ನಡೆಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದ ಕಾರಣ ಅಂಚೆ ಕಚೇರಿಯಲ್ಲಿ ಪತ್ರಗಳ ಕೊರತೆಯಾಯಿತು. ತಕ್ಷಣ ಅಲ್ಲಿನ ಸಿಬ್ಬಂದಿ ಸಿರಿಗೆರೆ ಅಂಚೆ ಕಚೇರಿಯಿಂದ ಪತ್ರಗಳನ್ನು ತರಿಸಿ ವಿದ್ಯಾರ್ಥಿಗಳಿಗೆ ನೀಡಿದರು.

ADVERTISEMENT

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡ ಕಟ್ಟಡ ತೆರವುಗೊಳಿಸಿ ಹೊಸ ಕೊಠಡಿಗಳ ನಿರ್ಮಾಣ ಮಾಡಬೇಕಿದೆ. ಮನವಿ, ಹೋರಾಟದ ಮೂಲಕ ಅಧಿಕಾರಿ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಬೇಡಿಕೆ ಶೀಘ್ರ ಈಡೇರಿಸಬೇಕು. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗ ಒಳಗೊಂಡ ಪದವಿ ಪೂರ್ವ ಕಾಲೇಜು ಆರಂಭವಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಚಳವಳಿ ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.