ADVERTISEMENT

ಅಂಗನವಾಡಿಯಲ್ಲೇ ಎಲ್‌ಕೆಜಿ, ಯುಕೆಜಿ ನಡೆಸಿ

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 13:19 IST
Last Updated 21 ಸೆಪ್ಟೆಂಬರ್ 2020, 13:19 IST
ಐಸಿಡಿಎಸ್ ಯೋಜನೆ ಉಳಿಸುವುದು ಸೇರಿ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೋಮವಾರ ಪ್ರತಿಭಟನೆ ನಡೆಸಿದರು.
ಐಸಿಡಿಎಸ್ ಯೋಜನೆ ಉಳಿಸುವುದು ಸೇರಿ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ‘ಎಲ್‌ಕೆಜಿ, ಯುಕೆಜಿ ತರಗತಿ’ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿದರು.

ಮುಖ್ಯರಸ್ತೆ ಮಾರ್ಗಗಳಲ್ಲಿ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಮೂಲಕ ಮನವಿ ರವಾನಿಸಿದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ‘ಐಸಿಡಿಎಸ್ ಯೋಜನೆ ಉಳಿಸಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮರಣ ಹೊಂದಿದಾಗ ಅವರ ಮಗಳಿಗೆ ಅನುಕಂಪದ ಆಧಾರದ ಮೇಲೆ ಹುದ್ದೆ ನೀಡಬೇಕು. ಕೊರೊನಾ ವಾರಿಯರ್‌ ಎಂಬುದಾಗಿ ಪರಿಗಣಿಸಿ, ಮೃತಪಟ್ಟ ಸಂದರ್ಭದಲ್ಲಿ ₹ 30 ಲಕ್ಷ ವಿಮೆಯನ್ನು ತುರ್ತಾಗಿ ನೀಡಬೇಕು. ಪಿಂಚಣಿ ಯೋಜನೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಜಮುನಾಬಾಯಿ, ಸಾವಿತ್ರಮ್ಮ, ರತ್ನಮ್ಮ, ರಾಧಮ್ಮ, ಭಾಗ್ಯಮ್ಮ, ವಿನೋಧಮ್ಮ, ಟಿ.ಆರ್. ಉಮಾಪತಿ, ಸತ್ಯಕೀರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.