ADVERTISEMENT

39,030 ಪ್ರಕರಣ ಇತ್ಯರ್ಥ

ರಾಷ್ಟ್ರೀಯ ಲೋಕ ಅದಾಲತ್‌

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 13:41 IST
Last Updated 26 ಜೂನ್ 2022, 13:41 IST

ಚಿತ್ರದುರ್ಗ: ಜಿಲ್ಲೆಯ ಹಲವು ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 39,030 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥವಾದವು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಮನಗೂಳಿ ಎಂ.ಪ್ರಮಾವತಿ ಅವರ ನೇತೃತ್ವದಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರದ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‌ ನಡೆಯಿತು. ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಂಡ ಕಕ್ಷಿದಾರರು ನ್ಯಾಯ ಪಡೆದುಕೊಂಡ ಭಾವನೆಯಲ್ಲಿ ಮನೆಗೆ ಮರಳಿದರು.

ಜಿಲ್ಲೆಯಲ್ಲಿ 36,577 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ. ಸಂಧಾನದ ಮೂಲಕ ಇತ್ಯರ್ಥಪಡಿಸಬಲ್ಲ ಪ್ರಕರಣಗಳನ್ನು ಮಾತ್ರ ಅದಾಲತ್‌ನಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಇದರಲ್ಲಿ 2,379 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಅಪಘಾತ ಪರಿಹಾರ, ಕಂದಾಯ ಪ್ರಕರಣ, ಚೆಕ್‌ಬೌನ್ಸ್‌, ಬ್ಯಾಂಕ್‌ ವಸೂಲಾತಿ, ನೀರು ಹಾಗೂ ವಿದ್ಯುತ್‌ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ADVERTISEMENT

ವ್ಯಾಜ್ಯಪೂರ್ವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬಗೆಹರಿದವು. 36,973 ಪ್ರಕರಣಗಳಲ್ಲಿ 36,651 ವ್ಯಾಜ್ಯ ಪೂರ್ವ ಪ್ರಕರಣಗಳು ಬಗೆಹರಿದವು. ಬಹುತೇಕವು ಚಿಕ್ಕ ಪ್ರಕರಣಗಳಾಗಿದ್ದವು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.