ಕರ್ನಾಟಕ ಲೋಕಾಯುಕ್ತ
– ಪ್ರಜಾವಾಣಿ ಚಿತ್ರ
ಚಿತ್ರದುರ್ಗ: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಮೇರೆಗೆ ಹೊಳಲ್ಕೆರೆ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಚಂದ್ರಕುಮಾರ್ ಗೆ ಸೇರಿದ 2 ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವ ಮೂರ್ತಿ ಅವರ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿತು.
ನಗರದ ತರಳಬಾಳು ನಗರದ ಮನೆ, ಟಿ.ನುಲೇನೂರು ಗ್ರಾಮದ ಮನೆ ಹಾಗೂ ಕೃಷಿ ಇಲಾಖೆ ಕಚೇರಿ ಮೇಲೆ ಸಿಬ್ಬಂದಿ ದಾಳಿ ನಡೆಸಿದರು.
ದಾಳಿ ತಂಡದಲ್ಲಿ ಡಿವೈಎಸ್ ಪಿ, ಇನ್ ಸ್ಪೆಕ್ಟರ್ ಮೃತ್ಯುಂಜಯ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.