ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಜವನಗೊಂಡನಹಳ್ಳಿ -ಗೋರಲಡುಕು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದ ಲಾರಿ ಹೊತ್ತಿ ಉರಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಏಷಿಯನ್ ಪೇಂಟ್ ಲಾರಿ ಸಾಗುತ್ತಿತ್ತು. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ, ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗಕ್ಕೆ ಹಾನಿಯಾಗಿದ್ದು, ಏಷಿಯನ್ ಪೇಂಟ್ ಬಾಕ್ಸ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.
ಲಾರಿ ಹೊತ್ತಿ ಉರಿಯುತ್ತಿದ್ದಂತೆ ಚಾಲಕ ಕಣ್ಮರೆಯಾಗಿದ್ದಾನೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.