
ಹಿರಿಯೂರು ಬಳಿ ಲಾರಿ–ಕಾರು ಮುಖಾಮುಖಿ ಡಿಕ್ಕಿ: ಚಿತ್ರದುರ್ಗದ ನಾಲ್ವರು ಯುವಕರ ಸಾವು
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ಬೀದರ್– ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನಗರದ ನಂಜಯ್ಯನಕೊಟ್ಟಿಗೆ ಕೆಳಗಿನ ಬಡಾವಣೆಯ ವಿಶ್ವನಾಥ್ (22), ನಂಜುಂಡಿ (23), ರಾಹುಲ್ (23) ಹಾಗೂ ಮೇಗಳ ಕೊಟ್ಟಿಗೆಯ ಯಶ್ವಂತ್ (22) ಎಂದು ಗುರುತಿಸಲಾಗಿದೆ. ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು.
ಯುವಕರ ತಂಡ ಹಳ್ಳಿಯೊಂದರಲ್ಲಿ ಊಟ ಮುಗಿಸಿಕೊಂಡು ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪಟ್ಟಣದ ಕಡೆಗೆ ಬರುವಾಗ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.