ADVERTISEMENT

ಮೊಳಕಾಲ್ಮುರು | ಪ್ರೇಮ ವೈಫಲ್ಯ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಮೇ 2025, 16:01 IST
Last Updated 13 ಮೇ 2025, 16:01 IST
ಅಂಜಲಿ
ಅಂಜಲಿ   

ಮೊಳಕಾಲ್ಮುರು: ತಾಲ್ಲೂಕಿನ ನಾಗಸಮುದ್ರ ಗ್ರಾಮದ ಯುವತಿಯೊಬ್ಬರು ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಯುವತಿ ಅಂಜಲಿ (25) ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ಲ್ಯಾಬ್‌ ಟೆಕ್ನೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ತಾಲ್ಲೂಕಿನ ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.

ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಬಂದು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ADVERTISEMENT

ಈ ಸಂಬಂಧ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.