ADVERTISEMENT

ಮಾದಾರ ಚನ್ನಯ್ಯ ಸ್ವಾಮೀಜಿ ಕೋವಿಡ್‌ನಿಂದ ಗುಣಮುಖ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 14:42 IST
Last Updated 30 ಸೆಪ್ಟೆಂಬರ್ 2020, 14:42 IST
ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ವೈದ್ಯರು ಹೂಗುಚ್ಛ ನೀಡಿ ಬೀಳ್ಕೊಟ್ಟರು.
ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ವೈದ್ಯರು ಹೂಗುಚ್ಛ ನೀಡಿ ಬೀಳ್ಕೊಟ್ಟರು.   

ಚಿತ್ರದುರ್ಗ: ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಗುಣಮುಖರಾಗಿದ್ದಾರೆ.

ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಸ್ವಾಮೀಜಿ ಬುಧವಾರ ಬಿಡುಗಡೆಗೊಂಡರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಸ್ವಾಮೀಜಿ ಅವರನ್ನು ಬೀಳ್ಕೊಟ್ಟರು. ಅಲ್ಲಿಂದ ನೇರವಾಗಿ ಗುರುಪೀಠಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು ಭಕ್ತರು ಸಂತಸದಿಂದ ಸ್ವಾಗತಿಸಿದರು.

ಒಳಮೀಸಲಾತಿ ಕುರಿತು ಚರ್ಚಿಸಲು ರಾಜ್ಯದ ಹಲವೆಡೆ ಪ್ರವಾಸ ಮಾಡಿದ್ದ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.