ಹೊಸದುರ್ಗ : ತಾಲ್ಲೂಕಿನ ಕಸಬಾ ಹೋಬಳಿಯ ಮಧುರೆ ಗ್ರಾಮದಲ್ಲಿ ನೆಲೆಸಿರುವ ಆಂಜನೇಯ ಸ್ವಾಮಿಯ ರಥೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ಶುಕ್ರವಾರ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾತ್ರಿ ಮಧುವಣಿಗ ಶಾಸ್ತ್ರ ಧಾರ್ಮಿಕ ವಿಧಿಗಳನ್ವಯ ನಡೆಯಿತು. ಶನಿವಾರ ಸಂಜೆ ಧೂಳು ಉತ್ಸವ, ದೊಡ್ಡೆಡೆ, ಧೂಪದ ಸೇವೆ ನಡೆಯಿತು.
ಭಾನುವಾರ ಬೆಳಿಗ್ಗೆ 9.3 ರ ಸಮಯದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ರಥದಲ್ಲಿ ಕೂರಿಸಲಾಯಿತು. ನಂತರ ಭಕ್ತರು ರಥ ಎಳೆದು ಭಕ್ತಿ ಸಮರ್ಪಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಪಾಲ್ಗೊಂಡಿದ್ದರು. ಮಧ್ಯಾಹ್ನ ಓಕಳಿ ಸೇವೆ ನಂತರ ರಥೋತ್ಸವ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.