ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದ ಕರಿಬಸವೇಶ್ವರ ಸ್ವಾಮಿ ರಥೋತ್ಸವ ಶನಿವಾರ ನಡೆಯಿತು.
ಶುಕ್ರವಾರ ಸಂಜೆ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಅಭಿಷೇಕ ನಡೆದ ನಂತರ ರಾತ್ರಿಯಿಡೀ ಭಜನೆ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಘೋಷಣೆಗಳನ್ನು ಕೂಗಿ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ವೀರಗಾಸೆ ನೃತ್ಯ, ನಂದಿಕೋಲು ಕುಣಿತ ಗಮನ ಸೆಳೆದವು. ಮಾ.7 ರಂದು ಬೆಳಿಗ್ಗೆ 8 ಗಂಟೆಯಿಂದ ಕರಿಬಸವೇಶ್ವರ ಸ್ವಾಮಿಯ ಪಳಾರವನ್ನು ಹಂಚಲಾಗುವುದು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.