ADVERTISEMENT

ಮಲ್ಲಾಡಿಹಳ್ಳಿ: 1,300 ವಿದ್ಯಾರ್ಥಿಗಳಿಂದ ಯೋಗ

ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 16:02 IST
Last Updated 21 ಜೂನ್ 2025, 16:02 IST
ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಆಶ್ರಮದ ಅಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿದರು
ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಆಶ್ರಮದ ಅಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿದರು   

ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 1,300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ತರಬೇತುದಾರ ಸಂತೋಷ್ ಕುಮಾರ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ಮಾಡಿದರು.

ಆಶ್ರಮದ ಅಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು. ‘ರಾಘವೇಂದ್ರ ಸ್ವಾಮೀಜಿ ಜೋಳಿಗೆ ಹಿಡಿದು ಭಿಕ್ಷೆ ಬೇಡಿ ಆಶ್ರಮ ಕಟ್ಟಿದ್ದರು. ಸೇವೆಯನ್ನೇ ಪ್ರಮುಖ ಗುರಿಯಾಗಿಟ್ಟುಕೊಂಡು ಆಶ್ರಮ ನಡೆಸಿದ್ದರು. ಅವರ ಹಾದಿಯಲ್ಲೇ ನಾನೂ ಕೂಡ ನಡೆಯುತ್ತೇನೆ. ನಾನು ಆಶ್ರಮದ ಅಧ್ಯಕ್ಷನಾಗಿರುವುದಕ್ಕಿಂತ ಹೆಚ್ಚಾಗಿ ಸೇವಕನಾಗಿ ಕೆಲಸ ಮಾಡುತ್ತೇನೆ. ಇಲ್ಲಿಗೆ ಬಂದಿರುವುದು ತವರು ಮನೆಗೆ ಬಂದಷ್ಟು ಸಂತಸವಾಗಿದೆ. ಆಶ್ರಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದರು.

ರಾಘವೇಂದ್ರ ಸ್ವಾಮೀಜಿ ರಚಿಸಿರುವ ಸೂರ್ಯ ನಮಸ್ಕಾರ ಹಾಗೂ ಯೋಗ ಪದ್ಧತಿಗಳ ಪ್ರದರ್ಶನ ನೀಡಲಾಯಿತು.

ADVERTISEMENT

ಆಶ್ರಮದ ಉಪಾಧ್ಯಕ್ಷ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಎಸ್.ಕೆ.ಬಸವರಾಜನ್, ಟ್ರಸ್ಟಿ ಕೆಂಗುಂಟೆ ಜಯಪ್ಪ, ಶ್ರೀನಿವಾಸ್, ರಾಮದಾಸ್, ಕೆ.ಎಂ.ಹಾಲಸ್ವಾಮಿ, ಪಾಂಡುರಂಗಸ್ವಾಮಿ, ಸೂರೇಗೌಡ, ಆಶ್ರಮದ ಎಲ್ಲಾ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.