ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನ ಹಳ್ಳಿ ಗೇಟ್ ಸಮೀಪ ಗುರುವಾರ ಬೆಳಿಗ್ಗೆ ಮೂರು ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಿರಿಯೂರು ತಾಲ್ಲೂಕಿನ ರಂಗೇನಹಳ್ಳಿಯ ರಾಜು (45) ಮೃತಪಟ್ಟವರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾರುತಿ ಆಮ್ನಿ ವಾಹನ ಬುಕ್ಕಾಪಟ್ಟಣದಿಂದ ಮೀನು ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ .ಅದಕ್ಕೆ ಮತ್ತೊಂದು ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಆಮ್ನಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಎರಡು ಕಾರುಗಳಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.