ಚಳ್ಳಕೆರೆ: ಇಲ್ಲಿನ ಪಾವಗಡ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪದ ರಾಘವೇಂದ್ರ ಕಲ್ಯಾಣ ಮಂಟಪದ ಆವರಣದ ಮಲದಗುಂಡಿ ಸ್ವಚ್ಛತೆಗೆ ಇಳಿದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಡವಾಗಿ ವರದಿಯಾಗಿದೆ.
ಚಳ್ಳಕೆರೆಯ ಗಾಂಧಿನಗರದ ನಿವಾಸಿ, ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಸಿ.ರಂಗಸ್ವಾಮಿ (48) ಮೃತ ವ್ಯಕ್ತಿ.
ಡಿ.18 ರಂದು ಕಲ್ಯಾಣ ಮಂಟಪದ ಆವರಣದಲ್ಲಿ ಮಲದ ಗುಂಡಿ ಸ್ವಚ್ಛಗೊಳಿಸುವಾಗ ಸಿ.ರಂಗಸ್ವಾಮಿ ಮೃತಪಟ್ಟಿದ್ದರು. ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿಯವರು ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನನ್ವಯ ಘಟನೆ ಪರಿಶೀಲಿಸಿ, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪಿಎಸ್‌ಐ ಸತೀಶ್ ನಾಯ್ಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.