
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಶ್ರೀರಾಂಪುರ (ಚಿತ್ರದುರ್ಗ): ಆಸ್ತಿ ವಿಚಾರವಾಗಿ ಸಹೋದರರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದಲ್ಲಿ ಶನವಾರ ನಡೆದಿದೆ. ಅಣ್ಣನೇ ತಮ್ಮನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದ ಸಿದ್ದೇಶ್ (36) ಕೊಲೆಯಾದ ವ್ಯಕ್ತಿ. ಆರೋಪಿ ಸತೀಶ್ ಎಂಬಾತನನ್ನು ಶ್ರೀರಾಂಪುರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಸ್ತಿ ಇಬ್ಬಾಗ ಮಾಡಿಕೊಂಡ ಸಹೋದರರು ಪ್ರತ್ಯೇಕವಾಗಿ ವಾಸವಾಗಿದ್ದರು. ಆಸ್ತಿ ಹಂಚಿಕೆ ವಿಚಾರವಾಗಿ ಶನಿವಾರ ಬೆಳಿಗ್ಗೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಹೊಡೆದಾಟ ಮಾಡಿಕೊಂಡಿದ್ದಾರೆ. ಅಣ್ಣ ದೊಣ್ಣೆಯಿಂದ ಹೊಡೆದು ತಮ್ಮನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.