ADVERTISEMENT

ಶೋಷಿತ ಸಮುದಾಯಕ್ಕೆ ಮಠವೇ ತಾಯಿ

ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಅಭಿಮತ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 5:51 IST
Last Updated 6 ಅಕ್ಟೋಬರ್ 2022, 5:51 IST
ಚಿತ್ರದುರ್ಗದ ಮುರುಘಾ ಮಠದಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ ವಧು–ವರರು ದಾಂಪತ್ಯಕ್ಕೆ ಕಾಲಿಟ್ಟರು. ಬಸವಪ್ರಭು ಸ್ವಾಮೀಜಿ, ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಇದ್ದರು.
ಚಿತ್ರದುರ್ಗದ ಮುರುಘಾ ಮಠದಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ ವಧು–ವರರು ದಾಂಪತ್ಯಕ್ಕೆ ಕಾಲಿಟ್ಟರು. ಬಸವಪ್ರಭು ಸ್ವಾಮೀಜಿ, ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಇದ್ದರು.   

ಚಿತ್ರದುರ್ಗ: ರಾಜ್ಯದ ಶೋಷಿತ ಸಮುದಾಯಗಳಿಗೆ ಮುರುಘಾ ಮಠವೇ ತಾಯಿ ಇದ್ದಂತೆ. ಮಠ ಜನಕಲ್ಯಾಣ ಬಯಸಿದೆ ಎಂದು ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಅಭಿಪ್ರಾಯಪಟ್ಟರು.

ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಒಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.

‘ಮಠ ಎಂದರೆ ಪರಂಪರೆ, ತಾಯಿ ಹಾಗೂ ಸರ್ವಾಂಗೀಣ ಪ್ರಗತಿ. ಮಠದಿಂದ ಎಲ್ಲ ಸಾಧನೆಗಳನ್ನು ಮಾಡಲು ಸಾಧ್ಯವಿದೆ. ಜನಕಲ್ಯಾಣ ಬಯಸುತ್ತ ನಿರಂತರವಾಗಿ ಮೂರು ದಶಕಗಳಿಂದ ಸಾಮೂಹಿಕ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ. ಇಂತಹ ಮದುವೆಗಳು ಸಾಮಾಜಿಕ ಸಾಮರಸ್ಯ, ಆರ್ಥಿಕ ಸಮಾನತೆ ತರುವ ಮಾರ್ಗ’ ಎಂದು ನುಡಿದರು.

ADVERTISEMENT

ದಾವಣಗೆರೆಯ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ‘ಭಾವೈಕ್ಯದ ಕೇಂದ್ರ ಸಾಮೂಹಿಕ ಕಲ್ಯಾಣ ಮಹೋತ್ಸವ. ಇದರಿಂದ ಆರ್ಥಿಕ ಹೊರೆಯನ್ನು ತಡೆಯಲು ಸಾಧ್ಯವಿದೆ. 33 ವರ್ಷದಲ್ಲಿ ಸುಮಾರು 20 ಸಾವಿರ ವಿವಾಹಗಳಾಗಿವೆ. ಅಮವಾಸ್ಯೆ, ರಾಹುಕಾಲ ಎನ್ನದೇ ಎಲ್ಲ ಸಂದರ್ಭದಲ್ಲಿಯೂ ವಿವಾಹ ನೆರವೇರಿಸಲಾಗಿದೆ’ ಎಂದರು.

ಚಿದರವಳ್ಳಿಯ ಶಿದ್ದರಹಳ್ಳಿ ಪಾರಮಾರ್ಥ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ, ‘ದುಂದುವೆಚ್ಚವನ್ನು ಕಡಿಮೆ ಮಾಡಲು ಮಠವು ಸಾಮೂಹಿಕ ವಿವಾಹ ಮಾಡುತ್ತಾ ಬಂದಿದೆ. ಆರ್ಥಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯವನ್ನು ಗುರುಗಳು ಮಾಡುತ್ತಾ ಬಂದಿದ್ದಾರೆ’ ಎಂದರು.

ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶರಣ ಸಂಸ್ಕೃತಿ ಉತ್ಸವ ಸಮಿತಿ ಗೌರವಾಧ್ಯಕ್ಷ ಬಸವಕುಮಾರ ಸ್ವಾಮೀಜಿ, ಕಾರ್ಯಾಧ್ಯಕ್ಷ ಎಸ್.ಲಿಂಗಮೂರ್ತಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.