ADVERTISEMENT

ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆಗೆ ಕ್ರಮ: ಶ್ರೀರಾಮುಲು

100 ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 7:05 IST
Last Updated 9 ನವೆಂಬರ್ 2021, 7:05 IST
ಮೊಳಕಾಲ್ಮುರಿನಲ್ಲಿ ಸೋಮವಾರ ನಡೆದ ಅಂಗವಿಕಲರಿಗೆ 100 ದ್ವಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಿದರು
ಮೊಳಕಾಲ್ಮುರಿನಲ್ಲಿ ಸೋಮವಾರ ನಡೆದ ಅಂಗವಿಕಲರಿಗೆ 100 ದ್ವಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಿದರು   

ಮೊಳಕಾಲ್ಮುರು: ಜಿಲ್ಲೆಯಎಲ್ಲಾ ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದಲ್ಲಿ ಸೋಮವಾರ ಡಿಎಂಎಫ್ ಅನುದಾನದಲ್ಲಿ ಅಂಗವಿಕಲರಿಗೆ 100 ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದ್ವಿಚಕ್ರ ವಾಹನ ನೀಡುವಂತೆ ನೂರಾರು ಅಂಗವಿಕಲರು ಮನವಿಮಾಡಿದ್ದು, ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿಎಂಎಫ್ ನಿಧಿಯಿಂದ ಜಿಲ್ಲೆಯಲ್ಲಿ 600ದ್ವಿಚಕ್ರ ವಾಹನವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಯಲ್ಲಿ ಶಾಸಕರ ಅನುದಾನದಲ್ಲಿಯೂ ಉಳಿದವರಿಗೆ ದ್ವಿಚಕ್ರ ವಾಹನಗಳನ್ನುವಿತರಿಸಲಾಗುವುದು. ಜಿಲ್ಲೆಯ ಎಲ್ಲ ಅಂಗವಿಕಲರಿಗೂ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ADVERTISEMENT

ಕೋವಿಡ್ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರು ಸೇರಿ ಬೇರೆ ಇಲಾಖೆಯ ವಾರಿಯರ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ದೇಶದ 130 ಕೋಟಿ ಜನಸಂಖ್ಯೆಯಲ್ಲಿ 100 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿರುವುದು ದೊಡ್ಡ ಸಾಧನೆಯಾಗಿದೆ. ಇದರಲ್ಲಿಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಅವಿಸ್ಮರಣೀಯ. ಮೊಳಕಾಲ್ಮುರು ತಾಲ್ಲೂಕಿನಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಶೇ 43ರಷ್ಟು ಲಸಿಕೆ, 2ನೇ ಅಲೆಯಲ್ಲಿ ಶೇ 50ರಷ್ಟು ಲಸಿಕೆ ನೀಡಲಾಗಿದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ. ಲಕ್ಷ್ಮಣ್, ಉಪಾಧ್ಯಕ್ಷೆ ಶುಭಾ, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ. ನಂದಿನಿದೇವಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಜೆ. ವೈಶಾಲಿ, ತಹಶೀಲ್ದಾರ್ ಸುರೇಶ್, ತಾಲ್ಲೂಕು ಪಂಚಾಯಿತಿ ಇಒ ಜಾನಕಿರಾಮ್, ಟಿಎಚ್ ಒ ಡಾ. ಸುಧಾ, ಬಿಜೆಪಿ ಮುಖಂಡರಾದ ಡಾ. ಪಿ.ಎಂ.ಮಂಜುನಾಥ್, ಇ. ರಾಮರೆಡ್ಡಿ, ಮಹಾಂತೇಶ್, ಬಿ. ವಿಜಯ್, ಪಾಪೇಶ್ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.