ADVERTISEMENT

‘ಸ್ವಾತಂತ್ರ್ಯಕ್ಕೆ ಹೋರಾಡಿದವರ ಸ್ಮರಣೆ ಅಗತ್ಯ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 2:05 IST
Last Updated 16 ಆಗಸ್ಟ್ 2021, 2:05 IST
ಹೊಳಲ್ಕೆರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ಪುರಸಭೆ ಮುಖ್ಯಾಧಿಕಾರಿ ಎ.ವಾಸಿಂ ಅವರಿಗೆ 2020ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು (ಎಡಚಿತ್ರ). ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್. ಆಂಜನೇಯ ಧ್ವಜಾರೋಹಣ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಪುರಸಭೆ ಸದಸ್ಯ ಬಿ.ಎಸ್. ರುದ್ರಪ್ಪ, ಸಜಿಲ್, ನಜರ್, ಅಲಿಮುಲ್ಲಾ ಷರೀಫ್, ಎಸ್.ಜೆ.ರಂಗಸ್ವಾಮಿ, ಗಂಗಾಧರ್ ಇದ್ದರು.

ಹೊಳಲ್ಕೆರೆ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾವಿರಾರು ಜನ ಹೋರಾಡಿದ್ದಾರೆ. ಅನೇಕರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಹೆಚ್ಚು ಅಭಿವೃದ್ಧಿ ಕಂಡಿದೆ. ದೇಶ ವಿಶ್ವಮಟ್ಟದಲ್ಲಿ ಹೆಸರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ನಾವೆಲ್ಲಾ ದೇಶ ಸೇವೆಗೆ ಬದ್ಧರಾಗಬೇಕು’ ಎಂದರು.

‘ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಪಣ ತೊಟ್ಟಿದ್ದೇನೆ. ₹ 276 ಕೋಟಿ ವೆಚ್ಛದಲ್ಲಿ ವಾಣಿವಿಲಾಸ ಸಾಗರದಿಂದ ತಾಲ್ಲೂಕಿನ ಪ್ರತಿ ಹಳ್ಳಿಗೆ ಕುಡಿಯುವ ನೀರು ತರುವ ಯೋಜನೆ ತಂದಿದ್ದೇನೆ. ಕ್ಷೇತ್ರದ 94 ಕೆರೆಗಳಿಗೆ ಭದ್ರಾ ನೀರು ತುಂಬಿಸಲು ₹800 ಕೋಟಿ ಅನುದಾನ ನೀಡಲಾಗಿದೆ’ ಎಂದು ಹೇಳಿದರು.

ADVERTISEMENT

2020ರ ಸ್ವಚ್ಛ ಸರ್ವೇಕ್ಷಣಾ ರಾಷ್ಟ್ರ ಪ್ರಶಸ್ತಿಯನ್ನು ಮುಖ್ಯಾಧಿಕಾರಿ ವಾಸಿಂ ಅವರಿಗೆ ಶಾಸಕರು ಪ್ರದಾನ ಮಾಡಿದರು. ಕೋವಿಡ್ ವಾರಿಯರ್ಸ್ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ರಮೇಶಾಚಾರಿ, ಪುರಸಭೆ ಅಧ್ಯಕ್ಷ ಅಶೋಕ್, ಉಪಾಧ್ಯಕ್ಷ ಕೆ.ಸಿ.ರಮೇಶ್, ಸದಸ್ಯರಾದ ಮುರುಗೇಶ್, ನಾಗರತ್ನಾ ವೇದಮೂರ್ತಿ, ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದೇಶ್, ತಾಲ್ಲೂಕು ಪಂಚಾಯಿತಿ ಇಒ ಗಂಗಣ್ಣ, ಬಿಇಒ ತಿಪ್ಪೇಸ್ವಾಮಿ, ಸಿಪಿಐ ರವೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.