ADVERTISEMENT

ವಾರ್ತಾ ಸಚಿವ ಸಿ.ಸಿ. ಪಾಟೀಲ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 3:37 IST
Last Updated 7 ಜೂನ್ 2021, 3:37 IST
ವಾರ್ತಾ ಸಚಿವ ಸಿ.ಸಿ. ಪಾಟೀಲ
ವಾರ್ತಾ ಸಚಿವ ಸಿ.ಸಿ. ಪಾಟೀಲ   

ಹಿರಿಯೂರು: ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಬಳಿ ಭಾನುವಾರ ವಾರ್ತಾ ಸಚಿವ ಸಿ.ಸಿ. ಪಾಟೀಲ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿದ್ದು, ವಾಹನದ ಬಾನೆಟ್ ಜಖಂ ಆಗಿದೆ.

ಸಚಿವರು ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತವಾದಕಾರಣ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆಮಾಡಿ ಸಚಿವರನ್ನು ಕಳುಹಿಸಿಕೊಡಲಾಗಿದೆ.‌ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.