ADVERTISEMENT

ಧರ್ಮಪುರ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಚಿವ ಡಿ.ಸುಧಾಕರ್ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2025, 14:42 IST
Last Updated 2 ಮಾರ್ಚ್ 2025, 14:42 IST
ಧರ್ಮಪುರ ಸಮೀಪದ ಕೃಷ್ಣಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು
ಧರ್ಮಪುರ ಸಮೀಪದ ಕೃಷ್ಣಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು   

ಧರ್ಮಪುರ: ಸಾರ್ವಜನಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರದ ಆಸ್ತಿಯನ್ನು ಸಂರಕ್ಷಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ಸಮೀಪದ ಕೃಷ್ಣಾಪುರದಲ್ಲಿ ₹20 ಲಕ್ಷ ಅನುದಾನದಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಅಂಬೇಡ್ಕರ್ ಚಿಂತನೆ ಮತ್ತು ಆದರ್ಶಗಳನ್ನು ಯುವ ಪೀಳಿಗೆ ಅನುಸರಿಸಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.

ADVERTISEMENT

ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ ಜಾನ್, ನಾಗರತ್ನಮ್ಮ, ಜ್ಯೋತಿ, ಲಕ್ಷ್ಮಿದೇವಿ, ಎಸ್.ಆರ್.ತಿಪ್ಪೇಸ್ವಾಮಿ, ಕೃಷ್ಣ, ಗೌಡಪ್ಪ, ನಾಗಣ್ಣ, ಈರಲಿಂಗೇಗೌಡ, ನೌಷದ್ ಖಾನ್, ಹನುಮಂತರಾಯ, ಜಯರಾಮ್, ಅಮಾನುಲ್ಲಾ, ಅಸ್ಲಾಂ ಖಾನ್, ಬಸವರಾಜು, ಎಚ್.ರಾಜು, ಲಕ್ಷ್ಮಣ, ದೇವೇಂದ್ರಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.