ADVERTISEMENT

ಧರ್ಮಪುರ | ಶಿಕ್ಷಣಕ್ಕೆ ಹೆಚ್ಚು ಒತ್ತು: ಡಿ. ಸುಧಾಕರ್ ಭರವಸೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 6:00 IST
Last Updated 25 ಫೆಬ್ರುವರಿ 2026, 6:00 IST
ಧರ್ಮಪುರ ಸಮೀಪದ ಹರಿಯಬ್ಬೆಯಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಶನಿವಾರ ಉದ್ಘಾಟಿಸಿದರು
ಧರ್ಮಪುರ ಸಮೀಪದ ಹರಿಯಬ್ಬೆಯಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಶನಿವಾರ ಉದ್ಘಾಟಿಸಿದರು   

ಧರ್ಮಪುರ: ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ತಿಳಿಸಿದರು.

ಸಮೀಪದ ಹರಿಯಬ್ಬೆ ಡಿ. ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ತಾಲ್ಲೂಕು ಕಲ್ಯಾಣಾಧಿಕಾರಿ ಶಿವಕುಮಾರ್ ಮಾತನಾಡಿದರು.

ADVERTISEMENT

ವೇದಿಕೆಯಲ್ಲಿ ನವೀನ್ ಮಸ್ಕಲ್, ಖಾದಿ ರಮೇಶ್, ಕೃಷ್ಣಮೂರ್ತಿ, ಈರಲಿಂಗೇಗೌಡ, ತಿಮ್ಮಣ್ಣ, ಕಂದಿಕೆರೆ ಸುರೇಶ್ ಬಾಬು, ರಮೇಶ್, ಪುಟ್ಟರಾಜು, ಚಿತ್ರಲಿಂಗಪ್ಪ, ಪರಮೇಶ್ವರ, ಗೋವಿಂದರಾಜು, ಶಾರದಾ ವೆಂಕಟೇಶಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.