ADVERTISEMENT

ಹಿರಿಯೂರು | ಅಹಿಂದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಡಿ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2025, 7:15 IST
Last Updated 23 ಡಿಸೆಂಬರ್ 2025, 7:15 IST
ಹಿರಿಯೂರು ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ರಸ್ತೆ ಕಾಮಗಾರಿಗೆ ಡಿ. ಸುಧಾಕರ್ ಭೂಮಿ ಪೂಜೆ ನೆರವೇರಿಸಿದರು
ಹಿರಿಯೂರು ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ರಸ್ತೆ ಕಾಮಗಾರಿಗೆ ಡಿ. ಸುಧಾಕರ್ ಭೂಮಿ ಪೂಜೆ ನೆರವೇರಿಸಿದರು   

ಹಿರಿಯೂರು: ‘ಪರಿಶಿಷ್ಟ ಜಾತಿ– ಪಂಗಡದವರು, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು. 

ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗ್ರಾಮದ ಎ.ಕೆ. ಕಾಲೊನಿಯಲ್ಲಿ ಭಾನುವಾರ ರಾತ್ರಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 

‘ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಇಲ್ಲ. ಹಿರಿಯೂರು ಕ್ಷೇತ್ರದಲ್ಲಿ 2018ರಿಂದ ಅಧಿಕಾರದಲ್ಲಿದ್ದ ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯನ್ನು ಕಡೆಗಣಿಸಲಾಗಿತ್ತು. ಇದೀಗ ಎರಡೂವರೆ ವರ್ಷದಿಂದ ಗರಿಷ್ಠ ಮಟ್ಟದ ಅನುದಾನವನ್ನು ಕ್ಷೇತ್ರಕ್ಕೆ ತರುವ ಮೂಲಕ ಮತ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ’ ಎಂದು ಸಚಿವರು ತಿಳಿಸಿದರು. 

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು, ಜ್ಞಾನೇಶ್, ಗುರುಪ್ರಸಾದ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನುಸೂಯಮ್ಮ, ಸದಸ್ಯ ಸುರೇಶ್ ಗೌಡ, ಶಂಕರಲಿಂಗಯ್ಯ, ಬೋರನಕುಂಟೆ ಜೀವೇಶ್, ರಾಮಯ್ಯ, ರವಿಯಾದವ್, ಸುರೇಶ್, ಗಿರಿಜಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.