ADVERTISEMENT

ವಿಜಯೇಂದ್ರ BJP ರಾಜ್ಯಾಧ್ಯಕ್ಷ: ಹೊಸ ಬಾಟಲಿಗೆ ಹಳೆ ವೈನ್ –ಸಚಿವ ಸುಧಾಕರ್ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2023, 15:35 IST
Last Updated 11 ನವೆಂಬರ್ 2023, 15:35 IST
   

ಚಿತ್ರದುರ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌, ‘ಹೊಸ ಬಾಟಲಿಗೆ ಹಳೆ ವೈನ್‌’ ಎಂದು ವ್ಯಂಗ್ಯವಾಡಿದ್ದಾರೆ.

‘ಬಿಜೆಪಿ ಹಾಗೂ ಕಾಂಗ್ರೆಸ್‌ ಸಿದ್ಧಾಂತ ಭಿನ್ನ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಅವರ ಪಕ್ಷದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ’ ಎಂದು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಸಮಾಜದಲ್ಲಿರುವ ಎಲ್ಲ ಜಾತಿಯವರು ನಮ್ಮ ಪಕ್ಷದೊಂದಿಗೆ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಜಯೇಂದ್ರ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪಕ್ಷ ಸಂಘಟನೆಯಲ್ಲಿ ಡಿ.ಕೆ.ಶಿವಕುಮಾರ್‌ ಅನುಭವ ದೊಡ್ಡದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.