ADVERTISEMENT

ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದು ತೋರಿಸಿ: ಕಾಂಗ್ರೆಸ್‌ಗೆ ಶ್ರೀರಾಮುಲು ಸವಾಲು 

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 12:40 IST
Last Updated 23 ನವೆಂಬರ್ 2021, 12:40 IST
ಸಚಿವ ಬಿ.ಶ್ರೀರಾಮುಲು
ಸಚಿವ ಬಿ.ಶ್ರೀರಾಮುಲು   

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ತೋರಿಸಲಿ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಸವಾಲು ಹಾಕಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದ ಕಾಂಗ್ರೆಸ್‌, 2023ರಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಶುರುವಾಗಿದೆ. ವಿಧಾನಪರಿಷತ್‌ ಚುನಾವಣೆ ಗೆದ್ದು ತೋರಿಸಿದರೆ ಮುಂದಿನ ಚುನಾವಣೆಯ ಭವಿಷ್ಯದ ಬಗ್ಗೆ ಮತದಾರರು ನಿರ್ಧರಿಸಲಿದ್ದಾರೆ’ ಎಂದರು.

‘ವಿಧಾನಪರಿಷತ್‌ನ 25ಸ್ಥಾನಗಳಲ್ಲಿ ಬಿಜೆಪಿ 14 ಸ್ಥಾನ ಗೆಲ್ಲಲಿದೆ. ಇದರಿಂದ ಹತಾಶರಾದ ಕಾಂಗ್ರೆಸ್‌ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸತ್ಯಕ್ಕೆ ದೂರವಾದ ಸಂಗತಿಗಳನ್ನು ಮುಂದಿಡುತ್ತಿದ್ದಾರೆ. ಕುರುಡು ಕುದುರೆಗಳಂತೆ ಇರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಪರಸ್ಪರ ಒಬ್ಬರನ್ನೊಬ್ಬರು ನೋಡಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಕುಟುಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.