ADVERTISEMENT

ವ್ಯವಸ್ಥಾಪನಾ ಮಂಡಳಿಗೆ ಶಾಸಕ ನವೀನ್‌

ಮುರುಘಾ ಮಠದ ಎಸ್‌ಜೆಎಂ ವಿಶ್ವವಿದ್ಯಾಲಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 5:55 IST
Last Updated 6 ಡಿಸೆಂಬರ್ 2022, 5:55 IST
ಕೆ.ಎಸ್‌. ನವೀನ್‌
ಕೆ.ಎಸ್‌. ನವೀನ್‌   

ಚಿತ್ರದುರ್ಗ: ಮುರುಘಾ ಮಠದ ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ (ಎಸ್‌ಜೆಎಂ) ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನಾಗಿ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ನವೀನ್‌ ಅವರನ್ನು ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗಿರುವ ಖಾಸಗಿ ವಿಶ್ವವಿದ್ಯಾಲಯಕ್ಕೆ ನವೀನ್‌ ಅವರು ಸರ್ಕಾರದ ಪ್ರತಿನಿಧಿಯಾಗಿದ್ದಾರೆ. ಮುಂದಿನ ಆದೇಶದವರೆಗೆ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎಸ್‌ಜೆಎಂ ವಿಶ್ವವಿದ್ಯಾಲಯಕ್ಕೆ ಸರ್ಕಾರ ಜೂನ್‌ನಲ್ಲಿ ಅನುಮೋದನೆ ನೀಡಿತ್ತು. ಎಸ್‌ಜೆಎಂ ವಿದ್ಯಾಪೀಠದ ಅಧೀನದಲ್ಲಿರುವ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ ಕಾಲೇಜು ಖಾಸಗಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ
ಒಳಪಟ್ಟಿವೆ.

ADVERTISEMENT

ಮುರುಘಾ ಮಠದ ಶಿವಮೂರ್ತಿ ಶರಣರು ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದು, ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ. ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಕ ಮಾಡಬೇಕು ಎಂಬ ವೀರಶೈವ ಲಿಂಗಾಯತ ಸಮಾಜದ ಪ್ರಮುಖರ ತಂಡದಲ್ಲಿ ಕೆ.ಎಸ್‌. ನವೀನ್‌ ಗುರುತಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.