ADVERTISEMENT

ಎರಡು ಜಿಲ್ಲೆ, ಎರಡು ಜಾತಿ ಸಚಿವರಿಂದ ಸಂಪುಟ ಭರ್ತಿ: ತಿಪ್ಪಾರೆಡ್ಡಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 8:32 IST
Last Updated 13 ಜನವರಿ 2021, 8:32 IST
ಜಿ.ಎಚ್. ತಿಪ್ಪಾರೆಡ್ಡಿ.
ಜಿ.ಎಚ್. ತಿಪ್ಪಾರೆಡ್ಡಿ.   

ಚಿತ್ರದುರ್ಗ: ರಾಜ್ಯ ಸಚಿವ ಸಂಪುಟದಲ್ಲಿ ಅರ್ಧಕ್ಕಿಂತ ಹೆಚ್ಚು ಸಚಿವರು ಬೆಂಗಳೂರು, ಬೆಳಗಾವಿ ಜಿಲ್ಲೆಗೆ ಸೇರಿದ್ದಾರೆ. ಎರಡೇ ಜಾತಿಯ ಸಚಿವರು ಸಂಪುಟದಲ್ಲಿ ತುಂಬಿಕೊಂಡಿದ್ದಾರೆ. ಸಂಪುಟದಲ್ಲಿ ಸಮಾನತೆ ಕಾಣದೇ ನಗೆಪಾಟಲಿಗೆ ಈಡಾಗಿದ್ದೇವೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅಸಮಾಧಾನ ಹೊರಹಾಕಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋಲು ಕಂಡಿದ್ದ ಸಿ.‍ಪಿ.ಯೋಗೇಶ್ವರ್‌ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ಪಕ್ಷ ಅಧಿಕಾರಕ್ಕೆ ಬರಲು ಅವರು ಮಾಡಿದ ಸಹಾಯವೇನು ತಿಳಿಯದು. ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೂ ಮಣೆ ಹಾಕಲಾಗಿದೆ’ ಎಂದು ಕಿಡಿಕಾರಿದರು.

‘51 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಐದು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ಇಡೀ ತಲೆಮಾರನ್ನು ರಾಜಕೀಯಕ್ಕೆ ಸವೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಮೂರು ಬಾರಿ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಹಾಗೂ ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.