
ಪ್ರಜಾವಾಣಿ ವಾರ್ತೆ
ಮೊಳಕಾಲ್ಮುರು: ತಾಲ್ಲೂಕಿನ ಕೆಳಗಳಹಟ್ಟಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ರಾಂಪುರ ಗ್ರಾಮದ ಕೊರಚರಹಟ್ಟಿಯ ರಾಮಚಂದ್ರ (30) ಮೃತರು.
ಅವರು ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರು ಚಾಲಕನ ಅತಿವೇಗ ಘಟನೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಕಾರಿನ ಚಾಲಕ ಆಂಧ್ರಪ್ರದೇಶದ ಉರುವಕೊಂಡ ತಾಲ್ಲೂಕಿನ ಕೊನಕೊಂಡ ಗ್ರಾಮದ ಕುರುಬ ಹೇಮಚರಣ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮೊಳಕಾಲ್ಮುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಮಹೇಶ್ ಹೊಸಪೇಟೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.