ಮೊಳಕಾಲ್ಮುರು: ತಾಲ್ಲೂಕು ಆಂಧ್ರಪ್ರದೇಶ ಗಡಿಯಲ್ಲಿದ್ದು, ನಿತ್ಯ ಎರಡೂ ರಾಜ್ಯಗಳ ಜನರ ಮಧ್ಯೆ ವ್ಯಾಪಾರ ವಹಿವಾಟು ನಡೆಯುತ್ತಿರುತ್ತವೆ. ಆದ್ದರಿಂದ ಆಂಧ್ರ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.
ತಾಲ್ಲೂಕಿನ ಕೆರೆಕೊಂಡಾಪುರದಲ್ಲಿ ಈಚೆಗೆ ₹ 2 ಕೋಟಿ ವೆಚ್ಚದಲ್ಲಿ ಆಂಧ್ರ ಗಡಿ ಸಂಪರ್ಕ ರಸ್ತೆಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.
‘ಬಳ್ಳಾರಿ ಜಿಲ್ಲೆ ಗಡಿಯಿಂದ ರಾಷ್ಟ್ರೀಯ ಹೆದ್ದಾರಿ 150 ‘ಎ’ನಲ್ಲಿರುವ ವಡೇರಹಳ್ಳಿ, ಪೆನ್ನಮ್ಮನಹಳ್ಳಿ, ವೆಂಕಟಾಪುರ ಮಾರ್ಗವಾಗಿ ಆಂಧ್ರಪ್ರದೇಶವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ನಿತ್ಯ ಕೃಷಿ ಉತ್ಪನ್ನಗಳ ಸಾಗಣೆ ಹೆಚ್ಚಾಗಿ ಮಾಡಲಾಗುತ್ತಿದೆ. ರಸ್ತೆ ನಿರ್ಮಿಸಿದಲ್ಲಿ ರೈತರಿಗೆ, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು.
ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಮುಖಂಡರಾದ ಎಂ.ಡಿ. ಚನ್ನಾರೆಡ್ಡಿ, ಡಿ.ಪೆನ್ನಯ್ಯ, ಪರಮೇಶ್ವರಪ್ಪ ಮತ್ತು ಪಿಡಿಒ ಗುಂಡಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.