ADVERTISEMENT

ಮೊಳಕಾಲ್ಮುರು | ಕೊಂಡ್ಲಹಳ್ಳಿ: ಮಾರಮ್ಮದೇವಿ ಜಾತ್ರೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 6:53 IST
Last Updated 29 ಆಗಸ್ಟ್ 2025, 6:53 IST
ಕೊಂಡ್ಲಹಳ್ಳಿಯ ಮಾರಮ್ಮದೇವಿ ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು 
ಕೊಂಡ್ಲಹಳ್ಳಿಯ ಮಾರಮ್ಮದೇವಿ ದೇವಸ್ಥಾನದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು    

ಮೊಳಕಾಲ್ಮುರು: ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಗುರುವಾರ ಗ್ರಾಮ ದೇವತೆ ಮಾರಮ್ಮ ದೇವಿ ವಾರ್ಷಿಕ ಜಾತ್ರೆ ವೈಭವದಿಂದ ನಡೆಯಿತು.

ಪ್ರತಿವರ್ಷ ಗೌರಸಮುದ್ರ ಮಾರಮ್ಮದೇವಿ ದೊಡ್ಡ ಪರಿಷೆ ನಡೆದ ಎರಡು ದಿನಗಳ ನಂತರ ಇಲ್ಲಿ ಜಾತ್ರೆ ನಡೆಸಿಕೊಂಡು ಬರುವುದು ವಾಡಿಕೆ. ಗ್ರಾಮಸ್ಥರು ದೇವಸ್ಥಾನಕ್ಕೆ ಭೇಟಿ ನೀಡಿ ಆವರಣದಲ್ಲಿರುವ ಬೇವಿನ ಕಟ್ಟೆಗೆ ಪ್ರದಕ್ಷಿಣೆ ಹಾಕಿ ಪೂಜೆ ಸಲ್ಲಿಸಿದರು. ಹರಕೆ ಹೊತ್ತವರು ಬೇವಿನ ಸೀರೆ ಹರಕೆ, ದವಸ-ಧಾನ್ಯಗಳ ಅರ್ಪಣೆ ಮಾಡಿದರು.

ಬೆಳಿಗ್ಗೆಯಿಂದ ಸಂಜೆವರೆಗೂ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದರು. ಮನೆಗಳಲ್ಲಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಸುತ್ತಮುತ್ತಲ ತಾಲ್ಲೂಕುಗಳಿಂದ ಜನರು ಆಗಮಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.