ಮೊಳಕಾಲ್ಮುರು: ‘ಪ್ರಸಕ್ತ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು 20 ಅಂಶಗಳ ಕಾರ್ಯಕ್ರಮ ಜಾರಿಗೆ ತಂದಿದೆ’ ಎಂದು ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್ ಹೇಳಿದರು.
ಇಲ್ಲಿನ ಆದರ್ಶ ಕೇಂದ್ರೀಯ ಶಾಲೆಯಲ್ಲಿ ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಅಭಿವೃದ್ಧಿ ಸಭೆಯಲ್ಲಿ ಅವರು ಮಾತನಾಡಿದರು.
‘ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರದಷ್ಟೇ ಹೊಣೆ ಪಾಲಕರ ಮೇಲೆ ಇದೆ. ಪಾಲಕರು ಸಹಭಾಗಿತ್ವ ನೀಡಿದಲ್ಲಿ ಮಾತ್ರ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯ. ಮನೆಯಲ್ಲಿ ಮಕ್ಕಳ ಕಲಿಕೆ ಬಗ್ಗೆ ಪಾಲಕರು ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಆರ್. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಎಂ. ರೂಪಾ, ಡಿ.ಎಂ. ನಂದೀಶ್, ಎ. ಅನಿತಾ, ಮುಜಾಮಿಲ್, ಡಿ. ವಿಜಯಲಕ್ಷ್ಮೀ, ಡಿ.ಎನ್. ನಂದೀಶ್, ಬಿ.ಸಿ. ವಿನಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.