ಮೊಳಕಾಲ್ಮುರು: ಕ್ಷೇತ್ರಕ್ಕೆ ಟಿಎಸ್‌ಪಿ, ಎಸ್‌ಸಿಪಿ ಯೋಜನೆಯಡಿ ಅನುದಾನ ತರುವಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ದೂರಿದ್ದಾರೆ.
ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಸಾಕಷ್ಟು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಸ್ಯೆಗಳು ಕಾಡುತ್ತಿದೆ. ಕೂಡಲೇ ಸರ್ಕಾರದ ಮೇಲೆ ಒತ್ತಡ ಹೇರಿ ಹೆಚ್ಚು ಅನುದಾನ ತಂದು ಪರಿಶಿಷ್ಟ ಜಾತಿ, ಪಂಗಡ ಜನರ ಅಭಿವೃದ್ಧಿಗೆ ಮುಂದಾಗಬೇಕು ಎಂದು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ರಾಜ್ಯಕ್ಕೆ 7 ಲಕ್ಷ ಮನೆಗಳು ಮಂಜೂರಾಗಿದ್ದರೂ ಯೋಜನೆ ಕುಂಠಿತವಾಗಿದೆ. ನಿವೇಶನಗಳ ಜಿಪಿಎಸ್ ಮಾತ್ರ ಮಾಡಲಾಗಿದೆ. ಉದ್ಯೋಗಖಾತ್ರಿ ಯೋಜನೆಯಲ್ಲಿ ಕೂಲಿ ಮತ್ತು ಸಾಮಗ್ರಿ ಅನುದಾನ ಸರಿಯಾಗಿ ಬಿಡುಗಡೆಯಾದೆ ಯೋಜನೆಗೆ ಹಿನ್ನೆಡೆಯಾಗಿದೆ ಎಂದು ಹೇಳಿದರು.
ಹಿಂದುಳಿದ ಕ್ಷೇತ್ರ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಮೊಳಕಾಲ್ಮುರು ಕ್ಷೇತ್ರಕ್ಕೆ ಕೈಗಾರಿಕೆಗಳನ್ನು ತಾರದೇ, ಉದ್ಯೋಗಾವಕಾಶ ಕಲ್ಪಿಸುವಲ್ಲಿ ತಾತ್ಸಾರ ಮಾಡಲಾಗಿದೆ. ಇಲ್ಲಿನ ಸಮಸ್ಯೆಗಳು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಗೆ ಬಂದಿದನ್ನು ಕಂಡಿಲ್ಲ ಎಂದು ಪ್ರಭಾಕರ್ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.