
ಪ್ರಜಾವಾಣಿ ವಾರ್ತೆ
ಮೊಳಕಾಲ್ಮುರು: ಉತ್ತಮ ಹಾಗೂ ತ್ವರಿತ ಸೇವೆ ಪರಿಗಣಿಸಿ ತಾಲ್ಲೂಕಿನ ಇಬ್ಬರು ಭೂಮಾಪನ ಇಲಾಖೆ ಸಿಬ್ಬಂದಿ ರಾಜ್ಯ ಸರ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಾಲ್ಲೂಕು ಸಹಾಯಕ ನಿರ್ದೇಶಕರಾದ ನಿರೂಷಾ ಮತ್ತು ಭೂಮಾಪಕರಾದ ಬಿ.ಸಿ. ಮುರಳಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆ.27 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.