
ಮೊಳಕಾಲ್ಮುರು: ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರು ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಆರ್. ನಾಗರಾಜ್ ಹೇಳಿದರು.
ಭಾನುವಾರ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.
ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರು ಪರಸ್ಪರ ಸಹಭಾಗಿತ್ವ ಹೊಂದಿದ್ದಾಗ ಮಾತ್ರ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನರ ಬಳಿಗೆ ಹೋಗುತ್ತಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇತ್ತೀಚೆಗೆ ಮೊಳಕಾಲ್ಮುರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದು, ಈ ಪೈಕಿ 26 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದೇವೆ. ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಪಿಎಸ್‌ಐ ಮಹೇಶ್ ಹೊಸಪೇಟೆ ತಿಳಿಸಿದರು.
ಮುಖಂಡರಾದ ಚಂದ್ರಶೇಖರ ಗೌಡ, ಶ್ರೀನಿವಾಸಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.