ADVERTISEMENT

ಮೊಳಕಾಲ್ಮುರು: ಅಟಲ್‌ ಜನ್ಮ ಶತಮಾನೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2024, 14:42 IST
Last Updated 25 ಡಿಸೆಂಬರ್ 2024, 14:42 IST
ಮೊಳಕಾಲ್ಮುರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಿಸಲಾಯಿತು
ಮೊಳಕಾಲ್ಮುರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಿಸಲಾಯಿತು   

ಮೊಳಕಾಲ್ಮುರು: ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಅಜಾತಶತ್ರು ಎನಿಸಿದ್ದು,  ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್‌ ಹೇಳಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಜಪೇಯಿ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.

ಆಧುನಿಕ ಸ್ಪರ್ಶದ ರಸ್ತೆಗಳು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಸರ್ವಶಿಕ್ಷಾ ಅಭಿಯಾನ, ಗ್ರಾಮ ಸಡಕ್‌ ಯೋಜನೆ, ಪೋಖರಣ್‌ನಲ್ಲಿ  ಪರಮಾಣು ಪರೀಕ್ಷೆ ಸೇರಿದಂತೆ ಹಲವು ಯೋಜನೆಗಳ ಮೂಲಕ ದೇಶದ ಶಕ್ತಿಯನ್ನು ವಿಶ್ಚಮಟ್ಟಕ್ಕೆ ಪರಿಚಯಿಸಿದರು. ಅವರ ಆದರ್ಶಗಳನ್ನು ಯುವಸಮೂಹ ಮೈಗೂಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. 

ADVERTISEMENT

ಪಟ್ಟಣ ಪಂಚಾಯಿತಿ ಸದಸ್ಯರಾದ ಟಿ.ಟಿ. ರವಿಕುಮಾರ್‌, ಮಂಜಣ್ಣ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್‌, ಎಸ್‌ಸಿ ಘಟಕದ ಅಧ್ಯಕ್ಷ ಮೊಗಲಹಳ್ಳಿ ಸಿದ್ಧಾರ್ಥ್‌, ಮುಖಂಡರಾದ ಹಣ್ಣಿನ ಸಿದ್ದಣ್ಣ, ಪೃಥಿರಾಜ್‌, ಅರ್ಜುನ್‌, ರಾಮಾಂಜಿನೇಯ, ಭೀಮಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.