ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಶಾಸಕ ವೀರೇಂದ್ರ ನಿವಾಸದಲ್ಲಿ ಇ.ಡಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 23:30 IST
Last Updated 2 ಸೆಪ್ಟೆಂಬರ್ 2025, 23:30 IST
ಚಳ್ಳಕೆರೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಅವರ ನಿವಾಸದಲ್ಲಿ ಇ.ಡಿ. ಅಧಿಕಾರಿಗಳು ಶೋಧ ನಡೆಸುವ ವೇಳೆ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿತ್ತು
ಚಳ್ಳಕೆರೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಅವರ ನಿವಾಸದಲ್ಲಿ ಇ.ಡಿ. ಅಧಿಕಾರಿಗಳು ಶೋಧ ನಡೆಸುವ ವೇಳೆ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿತ್ತು   

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಶಾಸಕ, ಕಾಂಗ್ರೆಸ್‌ನ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಚಳ್ಳಕೆರೆಯ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಮಂಗಳವಾರ ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ವೀರೇಂದ್ರ ಅವರು ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾಗಳಲ್ಲಿ ಹೊಂದಿರುವ ವ್ಯವಹಾರದ ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಈ ವೇಳೆ ನಾಲ್ಕು ಕಾರು ಜಪ್ತಿ ಮಾಡಿದರು. ನಂತರ ನಗರದ ಬ್ಯಾಂಕ್‌ಗಳಲ್ಲಿ ಇರುವ ಶಾಸಕರ ಖಾತೆಗಳ ಪರಿಶೀಲಿಸಿದರು. ಈವೇಳೆ ಭದ್ರತೆಗೆ ಅರೆ ಸೇನಾಪಡೆ ಸಿಬ್ಬಂದಿ ನಿಯೋಜಿಸಲಾಗಿತ್ತು.

ADVERTISEMENT
ಚಳ್ಳಕೆರೆ ನಗರದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಮನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.